ಶ್ರೀ ಬಸವೇಶ್ವರ ಕಲಾ ಮಹಾವಿದ್ಯಾಲಯ ಸ್ಥಾಪನೆಯೊಂದಿಗೆ ಕನ್ನಡ ವಿಭಾಗವು ಅಸ್ತಿತ್ವಕ್ಕೆ ಬಂದಿದೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಪೂಜ್ಯ ಶ್ರೀ ದೊಡ್ಡಪ್ಪ ಅಪ್ಪನವರು
ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು.
1934ರಲ್ಲಿ ಕನ್ನಡ ಮಾಧ್ಯಮದಲ್ಲಿ ಸಂಸ್ಥೆಯನ್ನು ಆರಂಭಿಸಿದ್ದು ಕನ್ನಡ ಭಾಷೆ ಮತ್ತು
ಸಾಹಿತ್ಯದ ಬೆಳವಣಿಗೆಗೆ ಮಹತ್ವದ ಹೆಜ್ಜೆಯಾಗಿದೆ.
ಅನೇಕ ಸಂಶೋಧಕರು, ವಿಮರ್ಶಕರು, ಸೃಜನಶೀಲ ಲೇಖಕರು ಮತ್ತು ಚಿಂತಕರು ಈ ವಿಭಾಗದ
ಶ್ರೇಯಸ್ಸಿಗೆ ಕಾರಣರಾಗಿದ್ದಾರೆ.